Kannada NewsKarnataka NewsLatest

*ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಬಂದ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸಿದೆ. ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ದ ಕುಸಿತವುಂಟಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವಿಮನೆ ಘಟ್ಟ ರಾಷ್ಟ್ರೀಯ ಹೆದ್ದರೈಯಲ್ಲಿಯೇ ಮತ್ತೆ ಗುಡ್ಡ ಕುಸಿದಿದೆ. ಭಾರಿ ಪ್ರಮಾಣದ ಮಣ್ಣು, ಮರಗಳು ರಸ್ತೆಯ ಮೇಲೆ ಬಿದ್ದಿದ್ದು, ಈ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ್ ಬಂದ್ ಆಗಿದೆ.

ನಿನ್ನೆ ಗುಡ್ಡ ಕುಸಿದ ಜಾಗದಲ್ಲಿಯೇ ಇಂದು ಮುಂಜಾನೆ ಕೂಡ ಗುಡ್ಡ ಕುಸಿದಿದ್ದು, ಈ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ವಾಹನ ಸಂಚಾರ ಅಸಾಧ್ಯವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button