*ಬೆಳಗಾವಿಯ ಹಿಂಡಲಗಾ ಜೈಲಿಗೆ ಡಿಜಿಪಿ ಅಲೋಕ್ ಕುಮಾರ ದಿಢೀರ್ ಭೇಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಹಿಂಡಲಗಾ ಗ್ರಾಮದಲ್ಲಿ ಇರುವ ಹಿಂಡಲಗಾ ಕಾರಾಗೃಕ್ಕೆ ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳವಾರ ಡಿಜಿಪಿ ಅಲೋಕಕುಮಾರ್ ಅವರು ಜೈಲಿಗೆ ಭೇಟಿ ನೀಡಿ, ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಯಾವುದೇ ರೀತಿಯ ಅಕ್ರಮಗಳು ನಡೆದರೆ ನಿಮ್ಮನ್ನೇ ಹೊಣೆ ಮಾಡುತ್ತೇವೆ. ಜೈಲಿನಲ್ಲಿ ಅಕ್ರಮಗಳು ನಡೆಯದಂತೆ ಎಚ್ಚರ ವಹಿಸಬೇಕು. ಜೈಲಿನ ಹೊರಗೆ ಮತ್ತು ಒಳಗಡೆ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
5ಜಿ ಜಾಮರ್ ಇದ್ರೂ ಜೈಲಿನೊಳಗೆ ನೆಟ್ವರ್ಕ್ ಬರ್ತಿದೆ. ಅಪರಿಚರಿಂದ ಮೊಬೈಲ್, ಮಾದಕ ವಸ್ತುಗಳ ಎಸೆತದ ಬಗ್ಗೆ ಜೈಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ.
ಸಭೆಯಲ್ಲಿ ಬಂಧಿಖಾನೆ ಇಲಾಖೆ ಉತ್ತರ ವಲಯದ ಐಜಿಪಿ ಟಿಪಿ ಶೇಷಾ, ಐಜಿಪಿ ಚೇತನ್ ಸಿಂಗ್ ರಾಥೋಡ್, ಕಮಿಷನರ್ ಭೂಷಣ್ ಬೋರಸೆ, ಎಸ್ಪಿ ಕೆ.ರಾಮರಾಜನ್, ಹಿಂಡಲಗಾ ಜೈಲು ಅಧೀಕ್ಷಕ ಕೃಷ್ಣಮೂರ್ತಿ ಭಾಗಿಯಾಗಿದ್ದರು.




