CrimeKannada NewsKarnataka NewsLatest

*ಜಿಲ್ಲಾಧಿಕಾರಿ ಕಚೇರಿ ಬಳಿ ವಾಮಾಚಾರ*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾಧಿಕಾರಿ ಕಚೇರು ಬಳಿ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಕೆಲ ವಾಮಾಚಾರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.

ಜಿಲ್ಲಾಧಿಕಾರಿ ಕಚೇರಿ ಬಳಿ ಮೊಟ್ಟೆ, ಬಾಳೆಹಣ್ಣು, ವೀಳ್ಯದೆಲೆ, ನಿಂಬೆಹಣ್ಣು ಪತ್ತೆಯಾಗಿದ್ದು, ತಡಾರಾತ್ರಿ ವಾಮಾಚಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನು ಕಂಡು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಭಯ-ಭೀತರಾಗಿದ್ದಾರೆ. ಘಟನ ಅಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಕೃತ್ಯವೆಸಗಿದವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button