Karnataka NewsLatestPolitics

*ಕೆರೆಯಲ್ಲಿ ಈಜಲು ಹೋಗಿದ್ದಾಗ ದುರಂತ: ಬೆಳಗಾವಿ ಬಾಲಕ ಸೇರಿ ಮೂವರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಿಸಿಲಿನ ಝಳದಿಂದ ಕಂಗೆಟ್ತಿದ್ದ ಮೂವರು ಬಾಲಕರು ಕೆರೆಯಲ್ಲಿ ಈಜಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. ಕೆರೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ.

Home add -Advt

ಮೃತರಲ್ಲಿ ಅಬ್ಬಾಸ್ ಮತ್ತು ಅಸ್ಲಂ ಸಹೋದರರು ಎಂದು ತಿಳಿದುಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಮೂವರು ಬಾಲಕರ ಶವಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಎಸ್​​ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button