Latest

ಧಾರವಾಡದ ಭೀಕರ ಅಪಘಾತ: 9ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಧಾರವಾಡದ ಬಾಡ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ 7 ಜನರು ಸಾವನ್ನಪ್ಪಿದ್ದರು. ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಇನ್ನೋರ್ವರು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದರು. ಗಾಯಗೊಂಡಿದ್ದ 6 ಜನರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ 16 ವರ್ಷ ಮನುಶ್ರೀ ಕೊನೆಯುಸಿರೆಳೆದಿದ್ದಾಳೆ. ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಅನನ್ಯಾ (14), ಹರೀಶ್ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20) ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಹಾಗೂ ಮನುಶ್ರೀ (16) ಸೇರಿದಂತೆ ಒಟ್ಟು 9 ಜನರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.

ಮರಕ್ಕೆ ಡಿಕ್ಕಿ ಹೊಡೆದ ಕ್ರೂಸರ್; 7 ಜನರು ದುರ್ಮರಣ

Home add -Advt

Related Articles

Back to top button