ಪ್ರಗತಿವಾಹಿನಿ ಸುದ್ದಿ; ಧಾರವಾಡ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
17 ವರ್ಷದ ಬಾಲಕಿಯನ್ನು ಅಪಹರಿಸಿದ್ದ ದುಷ್ಕರ್ಮಿಗಳು ಸಾಮುಹಿಕ ಅತ್ಯಾಚಾರವೆಸಗಿದ್ದು, ಕೃತ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಹರ ಠಾಣೆ ಪೊಲೀಸರು 6 ಅಪ್ರಾಪ್ತ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರ ವಿಚಾರಣೆ ವೇಳೆ ಯುವತಿಯ ಸ್ನೇಹಿತನಿಂದಲೇ ಕೃತ್ಯ ನಡೆದಿರುವ ಬಗ್ಗೆ ಬಯಲಾಗಿದೆ. ಯುವತಿಗೆ ಬೆದರಿಕೆಯೊಡ್ಡಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದ ಕೃತ್ಯವೆಸಗಲಾಗಿದೆ. 6 ಆರೋಪಿಗಳು ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಡ್ರಗ್ಸ್ ಜಾಲದಲ್ಲಿ ಸಿಲುಕಿದ ಮಗಳು; ರಕ್ಷಿಸಿ ಹೊರತರಲು ಸಹಾಯಮಾಡಿ; ವಿಹೆಚ್ ಪಿಗೆ ಪತ್ರ ಬರೆದ ಮಹಿಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ