*ಧಾರವಾಡ ಬಳಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಲಾರಿ ಹಾಗೂ ಕಾರಿನ ನಡಿವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘತನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಸಂಭವಿಸಿದೆ.

ಹಳಿಯಾಳ ಸೇತುವೆ ಬಳಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ಗಾಯಾಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Home add -Advt

35 ವರ್ಷದ ಬಿಂದು ಗೌಡ ಹಾಗೂ 36 ವರ್ಷದ ಬಾಪು ಗೌಡ ಮೃತರು. ಇನ್ನೋರ್ವ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತರು ಹಾಸನ ಹಾಗೂ ಮೈಸೂರು ಮೂಲದವರೆಂದು ತಿಳಿದುಬಂದಿದೆ.

ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ತೆರಳುತ್ತಿತ್ತು. ಹಳಿಯಾಳ ಸೇತುವೆ ಬಳಿ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button