Kannada NewsKarnataka NewsLatest

*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ*: *ನಡುರಸ್ತೆಯಲ್ಲೇ ಸುಟ್ಟು ಕರಕಲು*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ನಡು ರಸ್ತೆಯಲ್ಲಿಯೇ ಕಾರು ಸಂಪೂರ್ಣ ಬೆಕಿಗಾಹುತಿಯಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಅವೀದ್‌ ಶೇಖ್‌ ಅವರಿಗೆ ಸೇರಿದ KA-29-ME-3528 ನೋಂದಣಿ ಸಂಖ್ಯೆಯ ರೆನಾಲ್ಟ್‌ ಡಸ್ಟರ್‌ ಕಾರು ಬೆಂಕಿಗಾಹುತಿಗಾಯಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ತಕ್ಷಣ ಕಾರನ್ನು ನಿಲ್ಲಿಸಿ ಹೊರಗಿಳಿದಿದ್ದಾರೆ. ಅವರ ಕಣ್ಮುಂದೆಯೇ ಕ್ಷಣಾರ್ಧದಲ್ಲಿ ಕಾರಿನ ತುಂಬೆಲ್ಲ ಬೆಂಕಿ ಆವರಿಸಿದ್ದು, ಕಾರು ಸುಟ್ಟು ಕರಕಲಾಗಿದೆ.

ಧಾರವಾಡ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರು ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳಕ್ಕೆ ತೆರಳುತ್ತಿತ್ತು. ಧಾರವಾಡ ಬೈಪಾಸ್‌ ರಸ್ತೆಯ ಹಳಿಯಾಳ ಸೇತುವೆ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಕಾರಿನಲ್ಲಿದ್ದವರು ಕಾರನ್ನು ನಿಲ್ಲಿಸಿ ಹೊರಗೆ ಬಂದಿದ್ದಾರೆ. ಅವರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಧಗ ಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button