Latest

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ಹಿಜಾಬ್ ಧರಿಸಿಬಂದರೆ ಪರೀಕ್ಷೆಗಿಲ್ಲ ಅವಕಾಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರ್ಚ್ 9 ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಕಳೆದ ವರ್ಷದಂತೆಯೇ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಸಿ.ನಾಗೇಶ್, ನಾಳೆಯಿಂದ ಮಾರ್ಚ್ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲಿಸುವುದು ಕಡ್ಡಾಯ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶವಿರುವುದಿಲ್ಲ ಎಂದರು.

Home add -Advt

1,109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 10:15 ಮಧ್ಯಾಹ್ನ 1:30ರವರೆಗೆ ಪರೀಕ್ಷೆ ನಡೆಯಲಿದೆ. 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರುತ್ತವೆ. ಎಲ್ಲಾ ವಿಷಯಗಳಲ್ಲೂ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರುವಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದು ವಿವರಿಸಿದರು.

Related Articles

Back to top button