Latest

ಎಸ್ ಡಿಎಂ ನಲ್ಲಿ ಕೊರೊನಾ ಸ್ಫೋಟ; ಮತ್ತೆ 25 ಜನರಿಗೆ ವೈರಸ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಹೊಸದಾಗಿ ಮತ್ತೆ 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಎಸ್ ಡಿ ಎಂ ಕಾಲೇಜಿನ 306 ಜನರಿಗೆ ಸೋಂಕು ದೃಢಪಟ್ಟಿದೆ.

ಎಸ್‌ಡಿಎಂ ಕಾಲೇಜಿನಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊದಲು 66 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಬಳಿಕ 182 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿತ್ತು. ಈಗ ಒಟ್ಟು 306 ಪ್ರಕರಣಗಳು ದಾಖಲಾಗಿವೆ. ಒಟ್ಟು 3973 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. 2,217 ಜನರ ಪೈಕಿ 25 ಜನರಿಗೆ ಮಾತ್ರ ಸೋಂಕು ದೃಢಪಟ್ಟಿರೋದ್ರಿಂದ ಎಸ್‌ಡಿಎಂ ಕಾಲೇಜಿನಲ್ಲಿ ಕೊಂಚ ಮಟ್ಟಿಗೆ ನಿರಾಳ ಕಂಡುಬಂದಿದೆ.

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ‌ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಿತ್ಯವೂ 5000 ಪರೀಕ್ಷೆ ನಡೆಸಲು ಸೂಚನೆ ನೀಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button