Kannada NewsKarnataka NewsLatest

*ಧರ್ಮಸ್ಥಳ ಕೇಸ್: ಈ ಮೂವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಬುಧವಾರ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗಲಾಟೆ ಮಾಡಿದ್ದ ಓರ್ವ ಸ್ಥಳೀಯನನ್ನು ಬಂಧಿಸಲಾಗಿದೆ.‌ಇದೀಗ ಗಲಾಟೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಪುನೀತ್ ಕೆರೆಹಳ್ಳಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ

ಇದೀಗ ಧರ್ಮಸ್ಥಳದಲ್ಲಿ ಶಾಂತಿ ಅಪರಾಧಿಕ ಕೃತ್ಯಗಳನ್ನು ನಡೆಸಲು ಹಾಗೂ ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲಾಗಿದೆ.

ಧರ್ಮಸ್ಥಳದಲ್ಲಿ ನಡೆದ ಗಲಭೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಟೇರಣೆಯಾಗುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬುವವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಭೀತಿ ಉಂಟಾಗುವಂತೆ ಅಪಾಯಕಾರಿ ಹೇಳಿಕೆ ನೀಡಿದ್ದಾರೆ ಕೂಡಲೇ ಅವರನ್ನು ಬಂಧಿಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕೂಡ ದೂರು ನೀಡಿದ್ದಾರೆ.

Home add -Advt

ಇನ್ನು ಬೆಳ್ತಂಗಡಿ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎಂಬುವರು ಪುನೀತ್ ಕೆರೆಹಳ್ಳಿ ಯವರು ತಮ್ಮ ಯೂಟ್ಯೂಬ್ ನಲ್ಲಿ ಅಶ್ಲೀಲ ಪದದಲ್ಲಿ ಮಾತನಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಧರ್ಮಸ್ಥಳದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನರಲ್ಲಿ ದ್ವೇಷ ಉಂಟು ಮಾಡಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ ಸೆಕ್ಷನ್ 115(2), 189(2), 191(2), 351(2),352,190 ಅಡಿಯಲ್ಲಿ ಗಿರೀಶ್ ಮಟ್ಟಣನವರ್ (ಎ1), ಮಹೇಶ್ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್ ಸಮೀರ್(ಎ3), ಜಯಂತ್(ಎ4) ಇತರರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

Related Articles

Back to top button