Kannada NewsKarnataka NewsLatest

*ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಪಾಯಿಂಟ್ ನಲ್ಲಿ ಎಸ್ ಐಟಿ ಶೋಧಕಾರ್ಯ ಆರಂಭ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ತಂಡ ಇಂದು 13 ನೇ ಪಾಯಿಂಟ್ ನಲ್ಲಿ ಶೋಧಕಾರ್ಯಾಚರಣೆ ಆರಂಭಿಸಿದೆ.

ನೇತ್ರಾವತಿ ದಡದಲ್ಲಿ ದೂರುದಾರ ತೋರಿಸಿರುವ 13 ನೇ ಪಾಯಿಂಟ್ ಜಾಗದಲ್ಲಿ ಎಸ್ ಐಟಿ ತಂಡ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ. ಜಿಪಿಆರ್ ಹಾಗೂ ಡ್ರೋನ್ ಮೂಲಕವಾಗಿ ಮಣ್ಣಿನಲ್ಲಿ ಹೂತಿಟ್ಟಿರುವ ಶವಗಳ ಪತ್ತೆ ಕಾರ್ಯ ಆರಂಭಿಸಲಾಗಿದೆ. ಡ್ರೋನ್ ಮೌಂಟೆಡ್ ಜಿಪಿಆರ್ ಬಳಸಿ ಎಸ್ ಐಟಿ ತಂಡ ಶೋಧಕಾರ್ಯಾಚರಣೆ ನಡೆಸುತ್ತಿದೆ.

Home add -Advt

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ತೋರಿರುವ ವಿವಿಧ ಸ್ಥಳಗಳಲ್ಲಿ ಈಗಾಗಲೇ ಎಸ್ ಐಟಿ ಶೋಧ ಕಾರ್ಯಾಚರಣೆ ನಡೆಸಿದ್ದು, ಇಂದು ನಡೆಸುತ್ತಿರುವ 13 ನೇ ಪಾಯಿಂಟ್ ಶೋಧಕಾರ್ಯ ಅತ್ಯಂತ ಮಹತ್ವ ಪಡೆದುಕೊಂಡಿದೆ. ಈ ಜಾಗದಲ್ಲಿ ಹಲವು ಶವಗಳನ್ನು ಹೂತಿದ್ದಾಗಿ ದೂರುದಾರ ಹೇಳಿಕೆ ನೀಡಿದ್ದ.


Related Articles

Back to top button