
ದೂರುದಾರನ ಪರ ಸಾಕ್ಷ್ಯ ಹೇಳಲು ಮುಂದಾದ 6 ಜನರು
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಹಲವೆಡೆ ನೂರಾರು ಶವ ಹೂತಿಟ್ಟಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ದೂರುದಾರ ತೋರಿಸಿರುವ ಕೊನೇ ಸ್ಥಳಗಳಲ್ಲಿ ಶೋಧ ಕಾರ್ಯಕ್ಕೆ ಮುಂದಾಗುವ ಮುನ್ನವೇ ಹಲವು ಬೆಳವಣಿಗೆಗಳು ನಡೆಯುತ್ತಿವೆ.
ದೂರುದಾರ ತಾನು ನೂನಾರು ಶವಗಳನ್ನು ಹೂತಿಟ್ಟಿರುವುದಾಗಿ 13 ಸ್ಥಳಗಳನ್ನು ಈಗಾಗಲೇ ತೋರಿಸಿದ್ದು, ಅವುಗಳಲ್ಲಿ 12 ಸ್ಥಳಗಳಲ್ಲಿ ಅಸ್ಥಿಪಂಜರಗಳಿಗಾಗಿ ಎಸ್ ಐಟಿ ಶೋಧ ನಡೆಸಿದೆ. 6ನೇ ಪಾಯಿಂಟ್ ನಲ್ಲಿ ಮಾತ್ರ ಅಸ್ಥಿಪಂಜರ ಪತ್ತೆಯಾಗಿದೆ. ಈ ನಡುವೆ ಗುರುತು ಮಾಡಿದ ಜಾಗ ಬಿಟ್ಟು ಬೇರೊಂದು ಸ್ಥಳದಲ್ಲಿ ದೂರುದಾರ ಸ್ಥಳ ತೋರಿಸಿದ್ದು, ಅಲ್ಲಿಯೂ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ. ಇಂದು ಕೊನೆಯ ಹಾಗೂ 13ನೇ ಪಾಯಿಂಟ್ ನಲ್ಲಿ ಶೋಧಕಾರ್ಯ ನಡೆಯಬೇಕಿತ್ತು. ಆದರೆ ಅಷ್ಟರಲ್ಲಿ ಪ್ರಕರಣಕ್ಕೆ ಮತ್ತಷ್ಟು ತಿರುವು ಸಿಕ್ಕಿದೆ.
ದೂರುದಾರನ ಪರವಾಗಿ ಸಾಕ್ಷ್ಯ ಹೇಳಲು ಆರು ಜನ ಸ್ಥಳೀಯರು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಮಹತ್ವದ ಸಭೆ ನಡೆಸಿದ್ದಾರೆ.