Kannada NewsKarnataka NewsLatest

*ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಜಾಲತಾಣ ಹಾಗೂ ಯುಟ್ಯೂಬ್ ಗಳಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿರುವ ಆರೋಪ ಕೇಳಿಬಂದಿದ್ದು, ಯೂಟ್ಯೂಬರ್ ಗಳಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಹಿಂದೂ ಮುಖಂಡರೊಬ್ಬರು ದೂರು ನೀಡಿದ್ದಾರೆ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಹಿಂದೂ ಧಾರ್ಮಿಕ ಭಾವನೆಗೆ ಹಾನಿ ಮಾಡುತ್ತಿರುವ ಹೂಟ್ಯೂಬರ್ ಗಳು ವಿದೇಶದಿಂದ ಹಣ ಪಡೆಯುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಇಡಿಗೆ ಬಜರಂಗದಳ ಮುಖಂಡ ತೇಜಸ್ ಗೌಡ ದೂರು ನೀಡಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಿರುದ್ಧ ಅಪಪ್ರಚಾರ ಮಾಡಲು ಓರ್ವ ಮುಸ್ಲಿಂ ಯೂಟ್ಯೂಬರ್ ವಿದೇಶದಿಂದ ಹಣ ಪಡೆಯುತ್ತಿದಾನೆ. ಈತನ ಹಣದ ಮೂಲವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button