
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಮತ್ತೊಂದು ಸುತ್ತಿನ ಅಭಿಯಾನಕ್ಕೆ ಕರೆ ಕೊಟ್ಟಿದೆ. ಸೆಪ್ಟೆಂಬರ್ 1ರಿಂದ ಬಿಜೆಪಿಯಿಂದ ಧರ್ಮಸ್ಥಳ ಚಲೋ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಿಂದ ಧರ್ಮಸ್ಥಳ ಚಲೋ ನಡೆಸುತ್ತಿದ್ದೇವೆ. ಸರ್ಕಾರದ ಕಿವಿ ಹಿಂಡಿವ ಕೆಲಸ ಮಾಡಬೇಕಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ದೇವರ ಬಗ್ಗೆ ಎಷ್ಟು ಭಕ್ತಿ ಇದೆ ಗೊತ್ತಿಲ್ಲ. ಧರ್ಮಸ್ಥಳ ಬರಿ ದೇವಾಲಯವಲ್ಲ, ಅದು ಪುಣ್ಯ ಕ್ಷೇತ್ರ. ಅಣ್ಣಪ್ಪಸ್ವಾಮಿಗೆ ಕೋಟ್ಯಂತರ ಭಕ್ತರಿದ್ದಾರೆ. ಸಿಎಂ ಯಾರ ಮಾತು ಕೇಳಿ ಆತುರ ಮಾಡಿದರೀ ಗೊತ್ತಿಲ್ಲ ಎಲ್ಲವೂ ಹೊರಬರಬೇಕು ಎಂದರು.
ಸೆ.1ರಿಂದ ಬಿಜೆಪಿಯಿಂದ ಧರ್ಮಸ್ಥಳ ಚಲೋ ಆರಂಭವಾಗಲಿದೆ. ಬೃಹತ್ ಸಮಾವೇಶ ನಡೆಸಲು ಕೂಡ ನಿರ್ಧರಿಸಲಾಗಿದೆ ಎಂದು ಹೇಳಿದರು.