Kannada NewsKarnataka NewsLatest

*ಧರ್ಮಸ್ಥಳದಲ್ಲಿ ಗಲಾಟೆ ಕೇಸ್: 6 ಜನರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಚುರುಕುಗೊಳಿಸಿರುವಾಗಲೇ ಪಾಂಗಳ ಕ್ರಾಸ್ ಬಳಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಹಾಗೂ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಪದ್ಮನಾಭ್ ಪ್ರಸಾದ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದಿತ್ತು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದ್ದರು

ಪೊಲೀಸ್ ಅಧಿಕಾರಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಗಲಾಟೆ ಪ್ರಕರಣ ಸಂಬಂಧ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button