Karnataka News

*ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ (ಅಶೋಕ ಕುಮಾರ್) ಆದೇಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ (ಅಶೋಕ ಕುಮಾರ್) ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆಗುವುದಿಲ್ಲ.

ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೇನು?
-ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ, ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ.
-ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.

ಈ ಆದೇಶದ ಮಹತ್ವ- ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಅವಹೇಳನಕಾರಿ ಅಪಪ್ರಚಾರವನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಲಾಗಿದೆ.

Home add -Advt

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಈ ಆದೇಶದ ಪ್ರಕಾರ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂದಿದ್ದಲ್ಲಿ ತಕ್ಷಣ ಅಳಿಸಿಹಾಕುವುದು ಮತ್ತು ಮುಂದುವರಿಸಿದ್ದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ.


ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಗೌರವ ಹಾಗೂ ಪ್ರತಿಷ್ಠೆಯನ್ನು ರಕ್ಷಿಸಲು ಮತ್ತು ಅಪಪ್ರಚಾರ ತಡೆಯಲು ಮಹತ್ವದ ಆದೇಶವಾಗಿದೆ.

ಈ ಪ್ರಕರಣವನ್ನು ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಾದಿಸಿದರು.

Related Articles

Back to top button