
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮೆನ್ ನನ್ನು ಬಂಧಿಸಿರುವ ಎಸ್ ಐಟಿ ಅಧಿಕಾರಿಗಳು ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂಎಫ್ ಸಿ ಕೋರ್ಟ್ ಗೆ ಮಾಸ್ಕ್ ಮ್ಯಾನ್ ಸಿ.ಎನ್.ಚಿನ್ನಯ್ಯನನ್ನು ಹಾಜರುಪಡಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಮಾಸ್ಕ್ ಮ್ಯಾನ್ ಚಿನ್ನಯ್ಯ, ತಾನು ಶವಗಳನ್ನು ಹೂತಿಟ್ಟಿರುವುದು ನಿಜ ಎಂದು ಹೇಳಿದ್ದಾನೆ.
ಈ ವೇಳೆ ನ್ಯಾಯಾಲಯ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 11 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.