
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಮೂವರು ಯೂಟ್ಯೂಬರ್ ಗಳ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ಪಾಂಗಳದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಯುಈಟ್ಯೂಬರ್ ಗಳ ಪರವಾದ ಗುಂಪು ಹಾಗೂ ಸ್ಥಳೀಯರ ಗುಂಪಿನ ನಡುವೆ ವಾಗ್ವಾದ ಆರಂಭವಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದೆ, ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ. ಸ್ಥಳದಿಂದ ಕದಲದಿದ್ದರೆ ಲಾಠಿಚಾರ್ಜ್ ಮಾಡಲಾಗುವುದು ಎಂದು ಪೊಲೀಸರು ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.ಆದಾಗ್ಯೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಉದ್ರಿಕ್ತರನ್ನು ಚದುರಿಸಲು ಲಘುಲಾಠಿ ಪ್ರಹಾರ ಮಾಡಲಾಗಿದೆ ಎಂದು ತಿಳಿದುಬಂದಿದೆ.