Kannada NewsKarnataka NewsLatestPolitics
ಬೆಳಗಾವಿ ತಲುಪಿದ ಧಾರವಾಡ ಬಾಲಕಿಯ ಹೃದಯ; ನಾಲ್ವರ ಬಾಳಿಗೆ ಬೆಳಕಾದ 15ರ ಬಾಲಕಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 15 ವರ್ಷದ ಬಾಲಕಿ ತನ್ನ ಅಂಗಾಂಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾಳೆ.

ಮೆದಳು ನಿಷ್ಕ್ರಿಯಗೊಂಡಿದ್ದರೂ ಕೂಡ ಅಂಗಾಂಗಳು ಕಾರ‍್ಯನಿರ್ವಹಿಸುತ್ತಿದ್ದವು. ಮೆದುಳು ನಿಷ್ಕ್ರಿಯಗೊಂಡ ಬಾಲಕಿಯ ತಂದೆ ತಾಯಿ, ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನಿಮ್ಮ ಬಾಲಕಿ ನೀಡುವ ಅಂಗಾಂಗ ಇನ್ನೊಬ್ಬರ ಜೀವ ಉಳಿಸುತ್ತದೆ ಎಂದು ಹೇಳಿದಾಗ, ಸ್ವಇಚ್ಚೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.
ಮೆದುಳು ನಿಷ್ಕ್ರೀಯಗೊಂಡ ಬಾಲಕಿಯ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋಕಾಕ ತಾಲೂಕಿನ 22 ಯುವಕನಿಗೆ ಕಸಿ ಮಾಡುವಲ್ಲಿ ಡಾ.ರಿಚರ್ಡ ಸಾಲ್ಡಾನಾ, ಡಾ. ಮೋಹನ ಗಾನ, ಡಾ. ಆನಂದ ವಾಘರಾಳಿ ಮತ್ತು ಅವರ ತಂಡವು ನಿರತರಾದರು. ಮೃತಪಟ್ಟರೂ ಕೂಡ 4 ಜನರ ಜೀವ ಉಳಿಸಿದ ಸಾರ್ಥಕತೆ ಮೆರೆದ ಬಾಲಕಿ. ಬೆಳಗಾವಿ ಹಾಗೂ ಹುಬ್ಬಳ್ಳಿ ಪೊಲೀಸ ಇಲಾಖೆಯ ಕಾರ್ರ್ಯ ಅತ್ಯಂತ ಶ್ಲಾಘನೀಯವಾದ್ದು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ ನಿರ್ಮಿಸಿ ಅಂಗಾಂಗಳನ್ನು ಶೀಘ್ರ ಸ್ಥಳಾಂತರಿಸಲು ತೀವ್ರವಾದ ಮಳೆಯಲ್ಲಿಯೇ ನೆನೆಯುತ್ತ ಅವಕಾಶ ಕಲ್ಪಿಸಿಕೊಟ್ಟರು.
ಅಂಗಾಂಗಳನ್ನು ದಾನ ಮಾಡಿದ ಬಾಲಕಿ ಹಾಗೂ ಅವಳ ಕುಟುಂಬ ಸದಸ್ಯರು, ಪೋಲಿಸರ ಕಾರ‍್ಯವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ,ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ