ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ ಲೈನ್ ಸಮೀಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬಹುವರ್ಷದ ಬೇಡಿಕೆಯಾಗಿರುವ ಧಾರವಾಡ-ಕಿತ್ತೂರು-ಬೆಳಗಾವಿ ನೇರ ರೈಲ್ವೆ ಲೈನ್ ಕಾಮಗಾರಿ ಸಮೀಕ್ಷೆಗೆ ಅಂತಿಮ ಒಪ್ಪಿಗೆ ನೀಡಲಾಗಿದೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಸೂಚನೆಯ ಮೇರೆಗೆ ಸರ್ವೇ ಆದೇಶ ಹೊರಡಿಸಲಾಗಿದೆ. ಮುಂದಿನ 2 ತಿಂಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಧಾರವಾಡ ಹೈಕೋರ್ಟ್, ಕಿತ್ತೂರು ಮತ್ತು ಹಿರೇಬಾಗೆವಾಡಿಯಲ್ಲಿ ರೈಲ್ವೆ ನಿಲುಗಡೆ ಪ್ರಸ್ತಾಪಿಸಲಾಗಿದೆ.
ರಾಜ್ಯ ಸರಕಾರದ ಸಹಯೋಗದಲ್ಲಿ ಧಾರವಾಡಿ-ಕಿತ್ತೂರು-ಬೆಳಗಾವಿ ರೈಲ್ವೆ ಲೈನ್ ಕಾಮಗಾರಿ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಇದನ್ನೂ ಓದಿ – ಬಜೆಟ್ ಗೆ ಮುನ್ನವೇ ಬೆಳಗಾವಿಗೆ ಸುರೇಶ ಅಂಗಡಿ ಭರ್ಜರಿ ಘೋಷಣೆ
ಸುರೇಶ ಅಂಗಡಿ ರೈಲ್ವೆ ಸಚಿವರಾದ ನಂತರ ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲವಾಗುವ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ನೇರ ಸುಪರ್ ಫಾಸ್ಟ್ ರೈಲ್ವೆ ಆರಂಭಿಸುವ ಮೂಲಕ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.
ಇದನ್ನೂ ಓದಿ – ಸುರೇಶ ಅಂಗಡಿಯಿಂದ ಬೆಳಗಾವಿಗೆ ಮತ್ತೊಂದು ಕೊಡುಗೆ
ಬೆಳಗಾವಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಆದೇಶಿಸಿದ್ದಲ್ಲದೆ, ಗೂಡ್ಸ್ ಶೆಡ್ ನ್ನು ಸಾಂಬ್ರಾಕ್ಕೆ ಸ್ಥಳಾಂತರಿಸುವ ಕಾರ್ಯ ಆರಂಭಿಸಿದ್ದಾರೆ. ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ದಕ್ಷಿಣ ಭಾಗದಿಂದಲೂ ಪ್ರವೇಶ ಕಲ್ಪಿಸಲು ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದಾರೆ.
ಇದನ್ನೂ ಓದಿ – ರೈಲ್ವೆ ಕಾಮಗಾರಿಗಳಿಗೆ ವೇಗ -ಸಚಿವ ಸುರೇಶ ಅಂಗಡಿ ಭರವಸೆ
ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ ಲೈನ್ ಕಾಮಗಾರಿ ಸಮೀಕ್ಷೆಗೆ ಆದೇಶಿಸಲಾಗಿದೆ. ಇನ್ನು 2 ತಿಂಗಳಲ್ಲಿ ಈ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ.
-ಸುರೇಶ ಅಂಗಡಿ,
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ