Latest

ಮಾ. 26 ಮತ್ತು 27ರಂದು ಧಾರವಾಡ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ; ಹೆಚ್ಚಿನ ವಿವರ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಮಾ. 26 ಮತ್ತು 27ರಂದು ನಡೆಯಲಿದೆ. ಡಾ. ರಮಾಕಾಂತ ಜೋಶಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಡಾ. ಗುರುಲಿಂಗ ಕಾಪಸೆ ಉದ್ಘಾಟಿಸಲಿದ್ದಾರೆ.

ಮಾ. 28ರಿಂದ ಪಿಯುಸಿ ಮೊದಲ ವರ್ಷದ ಪರೀಕ್ಷೆ ಆರಂಭವಾಗುವುದರಿಂದ ಮತ್ತು ಅಂದು ಕೆ.ಎಸ್.ಆರ್.ಟಿ.ಸಿ ಯೂನಿಯನ್ ಮುಷ್ಕರ ಇರುವ ಹಿನ್ನೆಲೆಯಲ್ಲಿ ಮುಂಚಿತವಾಗಿ 26 ಮತ್ತು 27 ರಂದು ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದೇವೆ. ಎಂದು ಕಸಪ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ. ಲಿಂಗರಾಜ ಅಂಗಡಿ ತಿಳಿಸಿದ್ದಾರೆ.

ನಾಲ್ಕು ಸಾಹಿತ್ಯ ಗೋಷ್ಠಿ, ಎರಡು ಕವಿಗೋಷ್ಠಿ, ಉಪನ್ಯಾಸ, ಬಹಿರಂಗ ಅಧಿವೇಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಮ್ಮೇಳನಕ್ಕೆ ಅಂದಾಜು 7ಲಕ್ಷ ವೆಚ್ಚವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಪಠ್ಯಕ್ರಮದಲ್ಲಿ ಭಗವದ್ಗೀತೆ ನಮ್ಮ ಧ್ಯೇಯ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button