ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬ ಗೊಂದಲ್ಲಿ ಶಿಕ್ಷಣ ಇಲಾಖೆ ಇರುವಾಗಲೇ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಇನ್ನಷ್ಟು ಆತಂಕವನ್ನು ಹೆಚ್ಚಿಸಿದೆ.
ಧಾರವಾಡದ ಪ್ರತಿಷ್ಠಿತ ಶಾಲೆಯ 8 ಶಿಕ್ಷಕರಲ್ಲಿ ಮಹಾಮಾರಿ ಕೊರೊನಾ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಭಾನುವಾರ ಬಂದ 10 ಜನರಲ್ಲಿ 7 ಮಂದಿ ಶಿಕ್ಷಕರಿಗೆ ಸೋಂಕು ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ಶಿಕ್ಷಕಿಗೆ ಸೋಂಕು ದೃಢಪಟ್ಟಿತ್ತು. ಬಳಿಕ ಅವರ ಪತಿಯಲ್ಲೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಇದೀಗ ಈ ಶಿಕ್ಷಕಿಯು ಸಂಪರ್ಕಕ್ಕೆ ಬಂದಿದ್ದ ಇನ್ನುಳಿದ ಏಳು ಶಿಕ್ಷಕರಲ್ಲೂ ಸೋಂಕು ದೃಢಪಟ್ಟಿದೆ.
ಸೋಂಕು ಬಂದ ಶಿಕ್ಷಕಿ ಶಾಲೆಯ ಪೂರ್ವಭಾವಿ ಸಭೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಸೋಂಕು ಬಂದಿದೆ. ಜೂನ್ 8ರಂದು ಪೂರ್ವಭಾವಿ ಸಭೆ ನಡೆದಿತ್ತು. ಸಭೆಯಲ್ಲಿ ಸೋಂಕಿತ ಶಿಕ್ಷಕಿ ಜೊತೆ ಸಂಪರ್ಕಕ್ಕೆ ಬಂದ 7 ಮಂದಿ ಶಿಕ್ಷಕರಿಗೆ ಸೋಂಕು ದೃಢವಾಗಿದೆ. ಶಾಲೆ ಆರಂಭಕ್ಕೂ ಮುನ್ನವೇ ಶಿಕ್ಷಕರಲ್ಲಿ ಕೊರೊನಾ ದೃಢಪಟ್ಟಿರುವುದು ಪೋಷಕರಲ್ಲಿ ಆಂತಕ ಮನೆ ಮಾಡಿದೆ.
ಅಲ್ಲದೇ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದ 24 ಮಂದಿಯನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ