Kannada NewsKarnataka NewsLatest

*ಅಡ್ರೆಸ್ ಕೇಳುವ ನೆಪದಲ್ಲಿ ಬಾಲಕನ್ನು ತಡೆದು ಇಂಜಕ್ಷನ್ ಚುಚ್ಚಿ ಎಸ್ಕೇಪ್ ಆದ ಮುಸುಕುಧಾರಿಗಳು*

ಪ್ರಗತಿವಾಹಿನಿ ಸುದ್ದಿ: ಬಾಲಕನೊಬ್ಬ ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಹೋಗುತ್ತಿದ್ದ ವೇಳೆ ಆಗಂತುಕರ ಗುಂಪು ವಿಳಾಸ ಕೇಳುವ ನೆಪದಲ್ಲಿ ಬಾಲಕನನ್ನು ತಡೆದು ನಿಲ್ಲಿಸಿ ಇಂಜಕ್ಷನ್ ಚುಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಮುಸುಕುಧಾರಿಗಳು ಪರಾರಿಯಾಗಿದ್ದಾರೆ.

10 ವರ್ಷದ ಮಣಿಕಂಠ ಗಾಣಿಗೇರ ಎಂಬ ಬಾಲಕನಿಗೆ ಇಂಜೆಕ್ಷನ್ ಕೊಟ್ಟು ಕಿರಾತಕರು ಎಸ್ಕೇಪ್ ಆಗಿದ್ದಾರೆ, ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಗಟ್ಟಿಯಾಗಿ ಆತನ ಬಾಯಿ ಹಿಡಿದು ಇಂಜೆಕ್ಷನ್ ಚುಚ್ಚಿ ಪರಾರಿಗಿದ್ದಾರೆ.

ಕೂಡಲೇ ಬಾಲಕನನ್ನು ಪೋಷಕರು ಕುಂದಗೋಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕನಿಗೆ ಯಾವ ಇಂಜೆಕ್ಷನ್ ಕೊಟ್ಟಿದ್ದಾರೆ? ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ? ಎಂಬುದು ಗೊತ್ತಾಗದೇ ಪೋಷಕರು ಕಂಗಾಲಾಗಿದ್ದಾರೆ. ಕುಂದಗೋಳ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

Back to top button