Latest

ಗೋಬಿ ಮಂಚೂರಿ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ನೀಚ ಕೃತ್ಯ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ.

ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿಗೆ ಎಗ್ ರೈಸ್, ಗೋಬಿ ಮಂಚೂರಿ ಕೊಡಿಸುವುದಾಗಿ ಕರೆದೊಯ್ದ ಕಾಮುಕ ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಅಣ್ಣಿಗೇರಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯನ್ನು ಕೌನ್ಸಲಿಂಗ್ ಮಾಡುವಾಗ ಮಕ್ಕಳ ರಕ್ಶಣಾ ಘಟಕದ ಅಧಿಕಾರಿಗಳಿಗೆ ಬಾಲಕಿ ತನ್ನ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಪೊಲೀಸ್ ಪೇದೆಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button