Latest

ಬೆಳಗಾವಿಯಲ್ಲಿ ಶಾಸಕರ ಸಂಖ್ಯೆ ಹೆಚ್ಚಿರುವುದರಿಂದ ಸಚಿವ ಸ್ಥಾನದ ಬೇಡಿಕೆ ಸಹಜ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬೆಳಗಾವಿಯಲ್ಲಿ ಬಿಜೆಪಿ ಶಾಸಕರ ಪ್ರಾಬಲ್ಯ ಹೆಚ್ಚಿದೆ. ಅಲ್ಲದೆ ರಾಜ್ಯದಲ್ಲಿ ಅತಿ ಹೆಚ್ಚು ಶಾಸಕರಿರುವ ಜಿಲ್ಲೆ. ಹಾಗಾಗಿ ಅಲ್ಲಿನ ಶಾಸಕರು ಸಚಿವ ಸ್ಥಾನ ಕೇಳುವುದು ಸಹಜ ಎಂದು ಧಾರವಾಡ ಶಾಸಕ ಅರವಿಂದ್ ಬೆಲ್ಲದ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಬೆಳಗಾವಿ ದೊಡ್ಡ ಜಿಲ್ಲೆ, ರಾಜ್ಯದಲ್ಲೇ ಅತಿ ಹೆಚ್ಚು ಬಿಜೆಪಿ ಶಾಸಕರಿರುವ ಜಿಲ್ಲೆ. ಹೀಗಾಗಿ ಅಲ್ಲಿನ ಶಾಸಕರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುವುದರಲ್ಲಿ ಅಚ್ಚರಿಯಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರವಾಹ ಎದುರಾಯಿತು. ಈಗ ಕೊರೊನಾ ಬಂದಿದೆ. ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ಕೊರೊನಾ ನಿಭಾಯಿಸುವಲ್ಲಿ ಕೆಲಸದಲ್ಲಿ ಮಗ್ನರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಶಾಸಕರು ಫಂಡ್ ಹೆಚ್ಚು-ಕಡಿಮೆಯಾಗಿವೆ ಎಂದು ಹೇಳುತ್ತಿದ್ದಾರೆ. ಪಕ್ಷದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ಹೇಳಿದರು.

ಶಾಸಕರಾದವರಿಗೆಲ್ಲರಿಗೂ ಸಚಿವರಾಗುವ ಆಸೆ ಇದ್ದೇ ಇರುತ್ತದೆ. ಇದು ಯಾವುದೇ ಪಕ್ಷ ಅಧಿಕಾರದಲ್ಲಿದ್ದಾಗಲೂ ಎಲ್ಲಾ ಶಾಸಕರಿ ಈ ಬೇಡಿಕೆ ಇಡುತ್ತಾರೆ. ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಇದನ್ನು ಬಗೆಹರಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.

Home add -Advt

Related Articles

Back to top button