Latest

ಅತ್ತಿಗೆಯನ್ನೇ ಬರ್ಬರವಾಗಿ ಹತ್ಯೆಗೈದ ಮೈದುನ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಕೌಟುಂಬಿಕ ಕಲಹದಿಂದಾಗಿ ಮೈದುನನೊಬ್ಬ ತನ್ನ ಅತ್ತಿಗೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಅನಸೂಯಾ ಮೆಣಸಿನಕಾಯಿ (38) ಕೊಲೆಯಾದ ಮಹಿಳೆ. ಪ್ರತಿದಿನ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮೈದುನನ್ನು ಪ್ರಶ್ನೆ ಮಾಡಿದ್ದಕ್ಕೆ ಅತ್ತಿಗೆಯನ್ನೇ ಕೊಲೆಗೈದು ಪರಾರಿಯಾಗಿದ್ದಾನೆ. ಕೊಡಲಿಯಿಂದ ಅನುಸೂಯಾ ಕುತ್ತಿಗೆಯನ್ನು ಕಡಿದು ಹತ್ಯೆ ಗೈದಿದ್ದಾನೆ.

Home add -Advt

ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮುರುಘಾಶ್ರೀ ಪ್ರಕರಣ; ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನಕ್ಕೆ

https://pragati.taskdun.com/latest/murughashree-casewarden-rashmijudicial-custody/

Related Articles

Back to top button