Kannada NewsKarnataka NewsLatest

*ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಪಂಚಾಯತ್ ಪಿಡಿಒ*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಪಿಡಿಒ ಓರ್ವರು ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆರ್ ಟಿ ಐ ಕಾರ್ಯಕರ್ತ ಮಲ್ಲಿಕಾರ್ಜುನ್ ರೊಟ್ಟಿಗವಾಡ ಎಂಬಾತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಮಾಡಿಟ್ಟು ಧಾರವಾಡ-ಬೆಳಗಾವಿ ರಸ್ತೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಾಡಿಕೊಡಲು ಸಾಧ್ಯವಾಗದ ಕೆಲಸಗಳನ್ನು ಮಾಡಲು ರೊಟ್ಟಿಗವಾಡ ಕಿರುಕುಳ ನೀಡಿದ್ದಾರೆ. ನನಗೆ ಮಾತ್ರವಲ್ಲ ಇತರ ಅಧಿಕಾರಿಗಳಿಗೂ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ರೆಕಾರ್ಡ್ ಮಾಡಿರುವ ಪಿಡಿಒ ನಾಗರಾಜ್, ಬಳಿಕ ವಿಡಿಯೋವನ್ನು ಸ್ನೇಹಿತರಿಗೆ ವಾಟ್ಸಾಪ್ ಮಾಡಿದ್ದಾರೆ.

ವಾಟ್ಸಾಪ್ ವಿಡಿಯೋ ನೋಡಿದ ಸ್ನೇಹಿತರು ತಕ್ಷಣ ನಾಗರಾಜ್ ಇರುವ ಜಾಗವನ್ನು ಪತ್ತೆ ಮಾಡಿದ್ದಾರೆ. ಅಷ್ಟರಲ್ಲೇ ವಿಷ ಸೇವಿಸಿದ್ದ ನಾಗರಾಜ್ ಧಾರವಾಡ-ಬೆಳಗಾವಿ ರಸ್ತೆ ಪಕ್ಕದಲ್ಲಿ ಸಿಕ್ಕಿದ್ದು, ಅಸ್ವಸ್ಥಗೊಂಡಿರುವ ಪಿಡಿಒ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button