
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಓರ್ವ ವ್ಯಕ್ತಿಯಿಂದ ಗ್ರಾಮದ 23 ಜನರಿಗೆ ಕೊರೊನಾ ಸೋಂಕು ಹರಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಒಂದೇ ದಿನ 34 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ ಒಬ್ಬ ವ್ಯಕ್ತಿಯಿಂದ ಒಂದೇ ಗ್ರಾಮದ 23 ಜನರಿಗೆ ಕೊರೋನಾ ಸೋಂಕು ತಗುಲಿದ ಘಟನೆಯೂ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ 23 ಜನರಿಗೆ ಕೊರೋನಾ ಸೋಂಕು ಹರಡಿದೆ. ಮಗಳನ್ನು ಕರೆತರಲು ದೆಹಲಿಗೆ ಹೋಗಿದ್ದ ವ್ಯಕ್ತಿ ಬರುವಾಗ ಸೋಂಕಿತನಾಗಿ ಬಂದಿದ್ದ ಎನ್ನಲಾಗಿದ್ದು, ವ್ಯಕ್ತಿಯ ಮನೆಯ ನಾಲ್ವರಿಗೂ ಸೋಂಕು ತಗುಲಿದೆ.
ಸೋಂಕಿತ ವ್ಯಕ್ತಿಯಿಂದ ಗ್ರಾಮದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ, ಪಿ-6222 ನಿಂದಲೇ ಗ್ರಾಮದಲ್ಲಿ ಕೊರೋನಾ ಮಾಹಾಸ್ಪೋಟವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ