Latest

ಕುಡುಕ ಪತಿ ಕಾಟಕ್ಕೆ ಬೇಸತ್ತ ಪತ್ನಿ; ಗಂಡನನ್ನೇ ಕೊಂದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಕುಡಿದು ಪ್ರತಿದಿನ ಜಗಳವಾಡುತ್ತಿದ್ದ ಪತಿಯ ಕಾಟಕ್ಕೆ ಬೇಸತ್ತ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯೋರ್ವರು ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆ ಮರೇವಾಡ ಗ್ರಾಮದಲ್ಲಿ ನಡೆದಿದೆ.

ಈರಣ್ಣ ಕೊಲೆಯಾದ ವ್ಯಕ್ತಿ. ಧಾರವಾಡ ಗ್ರಾಮೀಣ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ ತನ್ನ ಮಗಳ ಜತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Home add -Advt

ಕುಡಿದು ಬಂದ ಪತಿ ಈರಣ್ಣ ಪತ್ನಿ ಶೋಭಾ ಹಾಗೂ ಮಗಳ ಜತೆ ಗಲಾಟೆ ಮಾಡಿದ್ದಾನೆ. ಈ ವೇಳೆ ಮಾತಿನಚಕಮಕಿ ಆರಂಭವಾಗಿದೆ. ಶೋಭಾ ಹಾಗೂ ಮಗಳು ಈರಣ್ಣ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಾನ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ

Related Articles

Back to top button