Latest

ಪೊಲೀಸ್ ತರಬೇತಿ ಶಾಲೆಗೂ ವಕ್ಕರಿಸಿದ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡದ ಪೊಲೀಸ್ ತರಬೇತಿ ಶಾಲೆಯ ನೂರಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ.

ಧಾರವಾಡ ಹೊರವಲಯದ ಕಲಘಟಗಿ ರಸ್ತೆಯಲ್ಲಿರುವ ತರಬೇತಿ ಶಾಲೆಯಲ್ಲಿ 380 ಜನ ಪ್ರಶಿಕ್ಷಾರ್ಥಿ ಪೊಲೀಸರು ತರಬೇತಿ ಪಡೆಯುತಿದ್ದು, ಇವರಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ತರಬೇತಿ ಪಡೆಯುತ್ತಿದ್ದವರಿಗೆ ಕೊರೊನಾ ಸೋಂಕು ಕಾಡುತ್ತಿದೆ. ಯಾವುದೇ ಪ್ರಶಿಕ್ಷಣಾರ್ಥಿ ತರಬೇತಿ ಕೇಂದ್ರದಿಂದ ಹೊರ ಹೋಗಿಲ್ಲ ಆದಾಗ್ಯೂ ಸೋಂಕು ಹರಡಿರುವುದು ಆತಂಕಕ್ಕೆ ಕಾರಣವಾಗಿದೆ.

ಆರಂಭದಲ್ಲಿ ಆರು ಜನರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ 380 ಪ್ರಶಿಕ್ಷಣಾರ್ಥಿಗಳನ್ನು ಆಂಟಿಜನ್ ಟೆಸ್ಟ್ ಗೆ ಒಳಪಡಿಸಿದ್ದರು. ಅದರಲ್ಲಿ ನೂರಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button