ಪ್ರಗತಿವಾಹಿನಿ ಸುದ್ದಿ; ಧಾರವಾಡ: ಕೊರೊನಾ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ವಿಪಕ್ಷ ಆರೊಪದಲ್ಲಿ ಹುರುಳಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಆರೋಪ ಸತ್ಯಕ್ಕೆ ಹತ್ತಿರವಾದದ್ದು, ಕಾರಣ ಕೊರೊನಾ ನಿಯಂತ್ರಣ ಪ್ರಕ್ರಿಯೆಯಲ್ಲಿ ಹೊರ ನೋಟಕ್ಕೆ ಹಲವಾರು ಗೊಂದಲಗಳು ಇರುವುದು ಕಂಡುಬರುತ್ತಿದೆ. ರಾಜ್ಯ ಸರ್ಕಾರ ಡಾ.ಕಜೆಯವರ 70 ಲಕ್ಷ ಆಯುರ್ವೇದಿಕ್ ಮಾತ್ರೆ ಖರೀದಿಸಿದೆ ಅದನ್ನು ಎಲ್ಲಿಯೂ ವಿತರಿಸುತ್ತಿಲ್ಲ. ಇದರಿಂದ ಸರ್ಕಾರದ ಮೇಲೆ ಸಂಶಯ ಬರುವಂತಾಗಿದೆ. ಅಲೋಪತಿಕ್ ಮಾಫಿಯಾ ದೊಡ್ಡದಿದೆ. ಈ ಲಾಬಿಗೆ ಕಜೆಯವರ ಔಷಧ ಬಲಿಯಾಗಿದೆ ಎಂದು ತಿಳಿಸಿದ್ದಾರೆ.
ಬಕ್ರೀದ್ ಹಬ್ಬ ಸಮೀಪಿಸುತ್ತಿರುವುದರಿಂದ ಗೋವುಗಳ ರಕ್ಷಣೆಗೆ ಮುಂದಾಗಬೇಕಿದೆ. ಅಕ್ರಮ ಗೋವು ಸಾಗಾಟ ತಡೆಗೆ ಎಂಟು ತಂಡ ರಚಿಸಿ ವಿಜಯಪುರ ಡಿಸಿ ಒಳ್ಳೆಯ ಕ್ರಮ ಕೈಗೊಂಡಿದ್ದಾರೆ. ಇದೇ ರೀತಿಯ ಕ್ರಮ ಎಲ್ಲಡೆ ಜಾರಿಯಾಗಬೇಕು. ಈಗಾಗಲೇ ಅನೇಕ ಕಡೆ ಗೋವು ಕಳ್ಳತನವಾಗಿವೆ, ಅವು ನಮ್ಮ ಗಮನಕ್ಕೆ ಬಂದಿವೆ ಈ ಕುರಿತು ಜಿಲ್ಲಾಧಿಕಾರಿಗಳು ಹೆಚ್ಚು ಗಮನ ಹರಿಸಬೇಕಿದೆ ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ