Karnataka News

*ಜಿಲ್ಲಾ ಆರೋಗ್ಯಾಧಿಕಾರಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಡಾ.ಪ್ರಭುಲಿಂಗ ಮಾನಕರ್ ಅಮಾನತುಗೊಂಡಿರುವ ಡಿಹೆಚ್ಒ. ಡಾ.ಪ್ರಭುಲಿಂಗ ಅವರ ಯಾದಗಿರಿ ಮನೆ, ಕಚೇರಿ, ಕಲಬುರ್ಗಿ ನಿವಸಗಳ ಮೇಲೆ ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ಬೆಳವಣಿಗೆ ಬಳಿಕ ಇದೀಗ ಡಿಹೆಚ್ಒ ಡಾ.ಪ್ರಭುಲಿಂಗ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button