
ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ ಹೆಗಡೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಧ್ರುವ ಸರ್ಜಾ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ.
ರಾಘವೇಂದ್ರ ಹೆಗಡೆಯವರಿಂದ 3.15 ಕೋಟಿ ಹಣ ಪಡೆದಿರುವ ಧ್ರುವ ಸರ್ಜಾ ವಂಚಿಸಿದಾರೆ ಎಂದು ಆರೋಪಿಸಲಾಗಿದೆ. 2018, 2021ರ ನಡುವೆ ಹಣ ಪಡೆದಿದ್ದ ಧ್ರುವ ಸರ್ಜಾ, ತನ್ನ ಪಾತ್ರದ ಚಿತ್ರೀಕರಣಕ್ಕೆ ಹಾಜರಾಗಿಲ್ಲ. ಹಣವನ್ನೂ ವಾಪಸ್ ಕೊಟ್ಟಿಲ್ಲ ಎಂದು ಆರೋಪಿಸಿ ಧ್ರುವ ಸರ್ಜಾ ವಿರುದ್ಧ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿದೆ.