
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಹಿರೇಬಾಗೇವಾಡಿ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಸ್ವಾತಿ ಅಡಿವೇಶ ಇಟಗಿ ಹಾಗೂ ಉಪಾಧ್ಯಕ್ಷರಾಗಿ ನಜರಿನ್ ಇಮ್ತಿಯಾಜ್ ಕರಿದಾವಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಸಿ ಪಾಟೀಲ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರೆಲ್ಲರೂ ಸೇರಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಸುರೇಶ ಇಟಗಿ, ಅಡಿವೇಶ ಇಟಗಿ, ಬಸನಗೌಡ ಪಾಟೀಲ, ಮಲಗೌಡ ಪಾಟೀಲ, ಮಹಾದೇವಿ ದುರ್ಗನ್ನವರ, ಅಂಜುಮ್ ಪಠಾಣ್, ಸುಧೀರ್ ಯಲಿಗಾರ, ಸುನಂದಾ ಹೊರಗಿನಮನಿ, ಗುಲ್ಜರ್ ಸೈಯದ್, ಶಿವಾನಂದ ತೋಟಗಿ, ಸಲೀಂ ಸತ್ತಿಗೇರಿ ಹಾಗೂ ಇತರರು ಉಪಸ್ಥಿತರಿದ್ದರು.