Kannada NewsKarnataka NewsLatestPolitics

*ದಿಡುಪೆ ಜಲಪಾತದ ಬಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮೂವರು ಯುವಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ದಿಡುಪೆ ಜಲಪಾತದ ಬಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತ ವೀಕ್ಷಿಸಲು ಕೆಲ ವಿದ್ಯಾರ್ಥಿಯರನ್ನು ಯುವಕರು ತಮ್ಮೊಂದಿಗೆ ಕರೆದೊಯ್ದಿದ್ದರು. ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಯುವಕರು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದಾರೆ. ಈ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಬಂಧಿತ ಆರೋಪಿಗಳು.

ಈ ಮೂವರು ಆರೋಪಿಗಳು ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರನ್ನು ಯುವಕರು ಮೇ 20ರಂದು ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಈ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಯುವತಿಯರು ಪ್ರತಿರೋಧಿಸಿದ್ದಾರೆ. ಸ್ಥಳದಲ್ಲಿದ್ದ ಜನರು ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button