Latest

ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಚಾಲನೆ ದೊರೆಯಿತು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೆನರಾ ಬ್ಯಾಂಕ್ ಸ್ಥಾಪಿಸಿರುವ ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಲಿಂಗಂ ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.ತಡೆರಹಿತ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಸುಧಾರಿತ ಮತ್ತು ಅನುಕೂಲಕರ ಡಿಜಿಟಲ್ ಸೌಲಭ್ಯಗಳನ್ನು ಆರಂಭಿಸಲಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶೋಭಾ ಕರಂದ್ಲಾಜೆ ತಿಳಿಸಿದರು.

ಮಳಲಿ ಮಸೀದಿ ವಿವಾದ ಮತ್ತೆ ತೀರ್ಪು ಕಾಯ್ದಿರಿಸಿದ ಕೋರ್ಟ್

Home add -Advt

https://pragati.taskdun.com/latest/malali-masjid-casemangalore-courtjudgement-postpone/

Related Articles

Back to top button