
ಪ್ರಗತಿವಾಹಿನಿ ಸುದ್ದಿ; ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ ನೀಡಿದರು.
ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಸೇವೆ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸಮಾಜದ ಕಟ್ಟಕಡೆಯ ಮನುಷ್ಯನಿಗೂ ತಲುಪುವಂತೆ ಮಾಡಲು ಶ್ರಮಿಸುತ್ತಿದೆ. ಡಿಜಿಟಲ್ ಇಂಡಿಯಾದಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ ತರುವ ಮೂಲಕ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡಲು ಒತ್ತು ನೀಡಿದೆ ಎಂದರು.
ಪ್ರತಿ ಐದು ಕಿ.ಮೀ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುವ ಪರಿಕಲ್ಪನೆ ಹೊಂದಲಾಗಿದೆ. ಗ್ರಾಹಕರು ಬ್ಯಾಂಕಿನಲ್ಲಿ ಸಮಯ ಕಳೆಯುವ ಬದಲಿಗೆ ಡಿಜಿಟಲ್ ವ್ಯವಹಾರ ಮಾಡಬೇಕು ಎಂದರು.
ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ರಸ್ತೆಬದಿ ವ್ಯಾಪಾರಿಗಳು ಇಂದು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುತ್ತಿದ್ದಾರೆ. ಮೈಸೂರು ನಗರದಲ್ಲಿ ನೊಂದಾಯಿಸಿಕೊಂಡಿರುವ 10,500 ರಸ್ತೆಬದಿ ವ್ಯಾಪಾರಿಗಳಲ್ಲಿ ಕೃಷ್ಣರಾಜ ಕ್ಷೇತ್ರದವರು 3,500 ಮಂದಿ ಇದ್ದಾರೆ. ತರಕಾರಿ ವ್ಯಾಪಾರ ಮಾಡುವವರು ಇಂದು ಆನ್‌ಲೈನ್ ಪೇಮೆಂಟ್ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್,ನಗರಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ, ಕರ್ಣಾಟಕ ಬ್ಯಾಂಕ್ ಎಜಿಎಂ ರಮೇಶ್‌ರಾವ್, ಬ್ಯಾಂಕ್ ಮ್ಯಾನೇಜರ್ ಅಪ್ಪಚ್ಚು ಹಾಜರಿದ್ದರು.
ಮುರುಘಾಮಠಕ್ಕೆ ಉಸ್ತುವಾರಿ ಪೀಠಾಧ್ಯಕ್ಷರ ನೇಮಕ
https://pragati.taskdun.com/latest/murughamathabasavaprabhushreeappointedincharge/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ