Latest

ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ; ಪಿಎಂ ಇ-ವಿದ್ಯಾ ಡಿಜಿಟಲ್ ಯುನಿವರ್ಸಿಟಿ ಆರಂಭ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸರ್ಕಾರ ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ದೇಶದ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ವೇಳೆ , ದೇಶದ ವಿದ್ಯಾರ್ಥಿಗಳಿಗೆ ಪಿಎಂ ಇ-ವಿದ್ಯಾ ಡಿಜಿಟಲ್ ಯುನಿವರ್ಸಿಟಿ ಲಾಂಚ್ ಮಾಡುವುದಾಗಿ ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕ ಬೆನ್ನಲ್ಲೇ ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಬಂದ್ ಆಗುತ್ತಿದ್ದು, ಇದರ ನಡುವೆಯೇ ಡಿಜಟಲ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಒನ್ ಕ್ಲಾಸ್ ಒನ್ ಟಿವಿ ಚಾನಲ್ ಪರಿಚಯಿಸುವ ಬಗ್ಗೆಯೂ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

ಪ್ರಾದೇಶಿಕ ಭಾಷೆಗಳಲ್ಲಿ ಪಾಠ ಪ್ರಸಾರ ಮಾಡಲಾಗುತ್ತದೆ. 1-12ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಒನ್ ಕ್ಲಾಸ್ ಒನ್ ಟಿವಿ ಚಾನಲ್ ಮೂಲಕ ಪಾಠ ಮಾಡಲಾಗುವುದು. ಪಿಎಂ ಇ-ವಿದ್ಯಾ ಯೋಜನೆಯಡಿಯಲ್ಲಿ 12 ಚಾನಲ್ ಗಳಿಂದ 200 ಚಾನಲ್ ವರೆಗೆ ವಿಸ್ತರಿಸುವುದಾಗಿ ತಿಳಿಸಿದರು.

ಯುವಕರ ಕೌಶಲ್ಯ ಅಭಿವೃದ್ಧಿಗಾಗಿ ಡಿಜಿಟಲ್ ದೇಶ್ ಇ-ಪೋರ್ಟಲ್ ಪ್ರಾರಂಭಿಸಲಾಗುವುದು. ಶಿಕ್ಷಕರಿಗೂ ವಿಶೇಷ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಡಿಜಿಟಲ್ ಕರೆನ್ಸಿ ಜಾರಿಗೆ ಕೇಂದ್ರ ನಿರ್ಧಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button