
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಇ-ಆಡಳಿತ ಯೋಜನೆ ಅಡಿ ಕೇಂದ್ರ ಸರ್ಕಾರದಿಂದ ಹಳ್ಳಿಗಳ ಡಿಜಟಲೀಕರಣ ಕಾರ‍್ಯ ನಡೆಯುತ್ತಿದೆ ಎಂದು ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆಯವರ ಪ್ರಶ್ನೆಗೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಮಂಗಳವಾರ ಉತ್ತರಿಸಿದೆ.
ಕರ್ನಾಟಕ ರಾಜ್ಯದ ಎಲ್ಲಾ ೩೦ ಜಿಲ್ಲೆಗಳಿಂದ ತಲಾ ಒಂದು ಹಳ್ಳಿಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿ ಡಿಜಿಟಲ್ ವಿಲೇಜ್ ಪೈಲಟ್ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ. ಹೆಚ್ಚುವರಿಯಾಗಿ, ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಿಂದ ಪಡೆದ ನಿಧಿಯ ಮೂಲಕ ಇ-ಆಡಳಿತ ಸೇವೆ ಇಂಡಿಯಾ ಲಿಮಿಟೆಡ್ ನಿಂದ ೧೯ ಗ್ರಾಮಗಳನ್ನು ಡಿಜಿಟಲ್ ಮಾಡಲಾಗಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕೇಂದ್ರ ವಲಯ ಯೋಜನೆಯಾದ ಡಿಜಿಟಲ್ ಇಂಡಿಯಾ ಯೋಜನೆಯಡಿ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಇ-ಆಡಳಿತ ಸೇವೆ ಇಂಡಿಯಾ ಲಿಮಿಟೆಡ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಒಟ್ಟು ರೂ. ೯೮.೩೨ ಕೋಟಿ ಆಗಿದೆ. ಆದ್ದರಿಂದ ಈ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯಗಳು/ಕೇಂದ್ರಾಡಳಿತ ಸರ್ಕಾರಗಳಿಗೆ ಪ್ರತ್ಯೇಕವಾಗಿ ಹಣವನ್ನು ಹಂಚಿಕೆ ಮಾಡಲಾಗಿಲ್ಲ ಎಂದು ತಿಳಿಸಿದೆ.
ಡಿಜಿಟಲ್ ವಿಲೇಜ್ ಯೋಜನೆಯಡಿ ಶ್ಷಿಕ್ಷಣ ಸೇವೆ, ಆರೋಗ್ಯ ಸೇವೆಗಳು, ಹಣಕಾಸು ಸೇರ್ಪಡೆ ಜಾಗೃತ ಕಾರ್ಯಕ್ರಮ, ಸೌರ ಬೀದಿ ದೀಪಗಳು (ಪ್ರತಿ ಗ್ರಾಮಕ್ಕೆ ೮ ಸೋಲಾರ್ ದೀಪಗಳು), ಅಟೋಮೋಟಿವ್ ಟೆಕ್ನಿಷಿಯನ್, ಹ್ಯಾಂಡ್ಸೆಟ್ ರಿಪೇರಿ, ಫಿಲ್ಡ್ ಟೆಕ್ನೀಶಿಯನ್ ಮತ್ತು ಎಲೆಕ್ಟ್ರಿಕಲ್ ಟೆಕ್ನಿಷಿಯನ್ ನಲ್ಲಿ ಕೌಶಲ್ಯ ಅಭಿವೃದ್ಧಿ ಪಡಿಸಲಾಗಿದೆ ಎಂದು ತಿಳಿಸಲಾಗಿದೆ.
ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ