
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವದ ಅಂಗವಾಗಿ ಶಿವಾಜಿ ಉದ್ಯಾನದಲ್ಲಿ ಶಿವಾಜಿ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿ, ಮಾಲಾರ್ಪಣೆ ಮಾಡಿಲಾಯಿತು.
ಸಂಸದರಾದ ಜಗದೀಶ್ ಶೆಟ್ಟರ್ ಶಾಸಕರಾದ ಅಭಯ್ ಪಾಟೀಲ್ ಮಹಾಪೌರರು, ಉಪ ಮಹಾಪೌರರು ಹಾಗೂ ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಮತ್ತಿತರರು ಶಿವಾಜಿ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿ, ಮಾಲಾರ್ಪಣೆ ಮಾಡಿದರು.
ಪಾಲಿಕೆ ಆಯುಕ್ತರಾದ ಶುಭ, ಕನ್ನಡ ಸಂಸ್ಕೃತ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ