Kannada NewsKarnataka NewsLatest

ಲಕ್ಷ್ಮಿ ಹೆಬ್ಬಾಳಕರ್ ಸಹೋದರಿ ಪುತ್ರಿಯ ವಿವಾಹದಲ್ಲಿ ಪಾಲ್ಗೊಂಡ ಡಿಕೆಶಿ, ಪರಮೇಶ್ವರ, ವಿಜಯ ರಾಘವೇಂದ್ರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹವು ಹುಬ್ಬಳ್ಳಿಯ ದಿ.ವಿಶ್ವಪ್ರಕಾಶ ಉಳ್ಳಾಗಡ್ಡಿಮಠ ಅವರ ಪುತ್ರ ರಜತ್ ಜೊತೆ ಬೆಳಗಾವಿಯಲ್ಲಿ ನಡೆಯಿತು.

ಇಲ್ಲಿಯ ಸಂಕಮ್ ಹೊಟೆಲ್ ಸಭಾಂಗಣದಲ್ಲಿ ವಿವಾಹ ಪೂರ್ವ ಕಾರ್ಯಕ್ರಮ ಹಾಗೂ ವಿವಾಹ ಕಾರ್ಯಕ್ರಮಗಳು ಒಟ್ಟೂ 3 ದಿನಗಳ ಕಾಲ ನಡೆಯಿತು. ಕೊರೋನಾ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಆಮಂತ್ರಣ ನೀಡಲಾಗಿತ್ತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಚಿತ್ರನಟ ವಿಜಯರಾಘವೇಂದ್ರ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ವಧು ವರರನ್ನು ಆಶಿರ್ವದಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button