*ಜನೌಷಧ ಕೇಂದ್ರ ಮುಚ್ಚುಲು ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದ ದಿನೇಶ್ ಗುಂಡುರಾವ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇರುವ ಜನೌಷಧ ಕೇಂದ್ರಗಳನ್ನು ಮುಚ್ಚುವತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾಗೆ ಪತ್ರ ಬರೆದಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆ ಬಳಿ ಇರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಬಗ್ಗೆ ನೀವು ಮಾನ್ಯ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಸ್ವೀಕರಿಸಿದ್ದೇನೆ. ಸಾರ್ವಜನಿಕರಿಗೆ ಕೈಗೆಟುಕುವ ಮತ್ತು ಗುಣಮಟ್ಟದ ಔಷಧಿಗಳನ್ನು ನೀಡುವ ನಿಮ್ಮ ಕಾಳಜಿಗೆ ನಾನು ಪ್ರಶಂಶಿಸುತ್ತೇನೆ’
ಕರ್ನಾಟಕ ಸರ್ಕಾರವು ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ಔಷಧಿಗಳ ಪಟ್ಟಿ ಪ್ರಕಾರ ಎಲ್ಲಾ ಅಗತ್ಯ ಔಷಧಿಗಳನ್ನು ಉಚಿತ ಪೂರೈಕೆ ಮಾಡುತ್ತೇವೆ ಎಂದು ತಿಳಿಸಲು ಬಯಸುತ್ತೇನೆ.
‘ಸಾರ್ವಜನಿಕ ಆರೋಗ್ಯ ಸೇವೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿಗಳನ್ನು ನಿರಾಕರಿಸುವಂಥಾ ಸ್ಥಿತಿಯನ್ನು ತಪ್ಪಿಸಲು, ಸರ್ಕಾರಿ ವೈದ್ಯರ ಪ್ರಿಸ್ಕ್ರಿಪ್ಪನ್‌ಗಳು ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡುವ ಔಷಧಿಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶಿಸಿದೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇರುವ ಜನೌಷಧ ಕೇಂದ್ರಗಳನ್ನು ಮುಚ್ಚುವ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ಕೂಡಾ ನಡೆಸಿದ್ದರು.