Karnataka News

*ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವರು, ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು.

15 ಸಾವಿರ ವೇತನ ಫಿಕ್ಸ್ ಮಾಡುವಂತೆ ಆಶಾ ಕಾರ್ಯಕರ್ತೆಯರು ಈ ವೇಳೆ ಸಚಿವರಿಗೆ ಒತ್ತಾಯಿಸಿದರು. ಈ ಕುರಿತಂತೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ 8 ಸಾವಿರ ಗೌರವಧನ ಖಚಿತವಾಗಿ ಸಿಗುತ್ತಿದೆ. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರ್ಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9500 ರೂ. ಪಾವತಿ ಮಾಡಲಾಗುತ್ತಿದೆ. ಇದನ್ನ ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸಿದ್ಧ ಎಂದರು.

ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ. ಏಕೆಂದರೆ ಪ್ರತ್ಸಾಹಧನ ಕೇಂದ್ರ ಸರ್ಕಾರ ನೀಡುವ ಅನುದಾನಗಳ ಮೇಲೆ ಅವಲಂಬಿತವಾಗಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ನಮೂದಾಗುವ ಆಶಾ ಕಾರ್ಯಕರ್ತೆಯರ ಸೇವಾಚಟುವಟಿಕೆಗಳ ಮೇಲೆ ಕೇಂದ್ರ ಸರ್ಕಾರ ಅನುದಾನವನ್ನ ಒದಗಿಸುತ್ತದೆ. ಇದು ಇಂತಿಷ್ಟೇ ಬರುತ್ತದೆ ಖಚಿತವಾಗಿ ಹೇಳಲು ಹೇಗೆ ಸಾಧ್ಯ ಎಂದರು. ನಮಗಿರುವ ಮಾಹಿತಿಯ ಪ್ರಕಾರ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿಸಿ ಲೆಕ್ಕ ಹಾಕಿದರೆ ಸರಾಸರಿ ಮಾಸಿಕ 9500 ರೂ ಆಶಾ ಕಾರ್ಯಕರ್ತೆಯರಿಗೆ ಪಾವತಿಯಾಗುತ್ತಿದೆ. ಹೀಗಾಗಿ 9500 ರೂಗಳನ್ನ ಬೇಕಾದರೆ ಮುಂಗಡವಾಗಿ ನೀಡಬಹುದು. ಬಳಿಕ ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟಿಕೆಗಳು ನಮೂದಾಗುವುದರ ಅನ್ವಯ ಪ್ರೋತ್ಸಾಹಧನ ಲಭ್ಯವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಅಲ್ಲದೇ ಮುಂಬರುವ ರಾಜ್ಯ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸಿ ಜೊತೆ ಚರ್ಚಿಸುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು. ರಾಜ್ಯ ಸರ್ಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರಿಗೆ ರಜೆಗಳನ್ನ ನಿಗದಿ ಮಾಡುವ ಬೇಡಿಕೆ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ದಿನೇಶ್ ಗುಂಡೂರಾವ್, ರಜೆಗಳನ್ನ ಕೇಳುವುದು ಆಶಾ ಕಾರದಯಕರ್ತೆಯರ ಹಕ್ಕು. ಈ ನಿಟ್ಟಿನಲ್ಲಿ ಚರ್ಚಿಸಿ ಕ್ರ‌ಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button