*ಯತ್ನಾಳ ವಿರುದ್ಧ ಕೇಸ್ ದಾಖಲಿಸಿದ ದಿನೇಶ್ ಗುಂಡೂರಾವ್ ಪತ್ನಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ತಮ್ಮ ಹಾಗೂ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ಗುಂಡೂರಾವ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಇಂದು ನ್ಯಾಯಾಲಯದಲ್ಲಿ ಪ್ರಮಾಣೀಕೃತ ಹೇಳಿಕೆ ದಾಖಲಿಸಿದ್ದಾರೆ.
ಬೆಂಗಳೂರಿನ 42 ಎಸಿಎಂಎಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಾಗಿದ್ದು ತಬು ಅವರ ಪರವಾಗಿ ಸೂರ್ಯ ಮುಕುಂದ್ ರಾಜ್ ನ್ಯಾಯಾಲಯದ ಮುಂದೆ ಹಾಜರಾಗಿ ವಾದ ಮಂಡಿಸಿದ್ದಾರೆ.
ಒಬ್ಬ ಜನಪ್ರತಿನಿಧಿಯಾಗಿದ್ದುಕೊಂಡು ಯತ್ನಾಳ್ ನೀಡಿರುವ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ತಮ್ಮ ರಾಷ್ಟ್ರೀಯತೆ ಹಾಗೂ ದೇಶಪ್ರೇಮದ ಬದ್ಧತೆಯನ್ನು ಪ್ರಶ್ನಿಸುವಂತಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ ಎಂದು ತಬು ರಾವ್ ಅವರು ಹೇಳಿಕೆ ದಾಖಲಿಸಿದ್ದಾರೆ.
ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಂಡಿರುವ ನ್ಯಾಯಾಲಯ ಆಗಷ್ಟ್ 7,8 ರಂದು ಪ್ರಕರಣವನ್ನು ಅವಗಾಹನೆಗೆ ತೆಗೆದುಕೊಳ್ಳುವುದನ್ನು ನಿರ್ಧರಿಸಲಿದ್ದು ವಿಚಾರಣೆ ಮುಂದೂಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ