Film & Entertainment

*ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಪತ್ನಿಗೆ ವಿಚ್ಛೇದನ ನೀಡುವಂತೆ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.

ಕ್ರೌರ್ಯದ ಆಧಾರದಲ್ಲಿ ವಿಚ್ಚೇದನ ಕೋರಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಪತ್ನಿ ವಿರುದ್ಧ ಆರೋಪ ಸಾಬೀತು ಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಪತ್ನಿ ನಗರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದ ದುನಿಯಾ ವಿಜಯ್, ಪತ್ನಿ ಟಾರ್ಚರ್ ನೀಡುತ್ತಿದ್ದಾಳೆ. ಆಕೆಗೆ ಜೀವನಾಂಶ ನೀಡಲು ಕೂಡ ಸಿದ್ಧನಿದ್ದು, ವಿಚ್ಛೇಧನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ವಿಜಯ್ ಪತ್ನಿ ನಾಗರತ್ನ, ಪತಿಗೆ ವಿಚ್ಛೇದನ ನೀಡಲು ಒಪ್ಪಿರಲಿಲ್ಲ. ತನಗೆ ಪತಿ ಬೇಕು ವಿಚ್ಛೇದನ ನೀಡುವುದಿಲ್ಲ ಎಂದು ವಾದಿಸಿದ್ದರು. ಅಂತಿಮವಾಗಿ ದುನಿಯಾ ವಿಜಯ್ ವಿಚ್ಛೇದನ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Home add -Advt


Related Articles

Back to top button