ಪ್ರಗತಿವಾಹಿನಿ ಸುದ್ದಿ : ನಾಳೆ ಬೆಂಗಳೂರಲ್ಲಿ ಖಾಸಗಿ ಹೋಟೆಲ್‌ನಲ್ಲಿ CLP ಸಭೆ ಹಿನ್ನೆಲೆ ಇಂದು ರಾಜ್ಯಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮಿಸಲಿದ್ದಾರೆ.
ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ CLP ಸಭೆ ಹಾಗೂ ಜ. 21ರಂದು ನಡೆಯಲಿರುವ ಬೆಳಗಾವಿಯಲ್ಲಿ ಗಾಂಧಿ ಸಮಾವೇಶದ ಕುರಿತು ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೆ ವೇಳೆ ಎಸ್‌ಸಿ, ಎಸ್‌ಟಿ ಸಚಿವರಿಂದ ಸಭೆಯ ಕುರಿತು ಅಜೆಂಡಾ ಮನವರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವೇಳೆ ಡಿನ್ನರ್ ಗೆ ಬ್ರೇಕ್ ಹಾಕಿದ ವಿಷಯದ ಕುರಿತು ಚರ್ಚೆ ನಡೆಸಲಾಗುತ್ತದೆ. ಸುರ್ಜೆವಾಲ್ ಆಗಮನದ ಹಿನ್ನೆಲೆಯಲ್ಲಿ ಪಕ್ಷದ ಒಗ್ಗಟ್ಟು ಕಾಪಾಡಲು ಕೆಲವು ಮಹತ್ವದ ಸೂಚನೆ ನೀಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ