ಪ್ರಗತಿವಾಹಿನಿ ಸುದ್ದಿ, ಕಾರವಾರ – ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರೆವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ೬ ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಮುಖೇನ ಹುದ್ದೆಗಳು ಭರ್ತಿ ಆಗುವವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇಲೆ ಮುಖಾಂತರ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
ಶುಶ್ರೂಷಕರು ಹುದ್ದೆಗೆ ೨೫ ಸಾವಿರ ವೇತನ ನಿಗಧಿ ಮಾಡಲಾಗಿದ್ದು, ಜುಲೈ ೨೨ರಂದು ಸಂದರ್ಶನ ದಿನಾಂಕ ನಿಗಧಿ ಮಾಡಲಾಗಿದೆ. ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ತಲಾ ೨೦ ಸಾವಿರ ವೇತನ ನಿಗಧಿ ಮಾಡಲಾಗಿದ್ದು, ಜುಲೈ ೨೧ರಂದು ಸಂದರ್ಶನ ದಿನಾಂಕ ನಿಗಧಿ ಮಾಡಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ತಮ್ಮ ಎಲ್ಲಾ ಮೂಲ ಹಾಗೂ ದೃಢೀಕೃತ ದಾಖಲಾತಿಗಳೊಂದಿಗೆ ಹಾಜರಾಗಬೇಕು ಹಾಗೂ ಅನುದಾನದ ಲಭ್ಯತೆಯ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳನ್ನು ಕೋವಿಡ್-೧೯ಗೆ ಸಂಬಂಧಿಸಿದ ಕಾರ್ಯ ನಿರ್ವಹಿಸುವ ಷರತ್ತಿನೊಂದಿಗೆ ಆಯ್ಕೆಮಾಡಲಾಗುವುದು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ಕಚೇರಿಯ ಸಮಯದಲ್ಲಿ ದೂರವಾಣಿ ಸಂಖ್ಯೆ: ೦೮೩೮೨-೨೨೬೩೩೯ ಗೆ ಸಂಪರ್ಕಿಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶರದ್ ನಾಯ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ