
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ಬೇಕಾ? ಮಕ್ಕಳಿಗೆ ಒಂದು ವರ್ಷ ಪ್ರಮೋಷನ್ ಕೊಟ್ಟರೆ ನಷ್ಟವೇನಿಲ್ಲ ಎಂದು ಖ್ಯಾತ ನಿರ್ದೇಶಕ ಟಿ.ಎನ್ ಸೀತಾರಾಮ್ ಹೇಳಿದ್ದಾರೆ.
ಕೊರೊನಾ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಶಾಲೆಗಳನ್ನು ಪುನರಾರಂಭಿಸಬೇಕೆ ಬೇಡ ವೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತಮ ಅಭಿಪ್ರಾಯ ವ್ಯಕ್ತಪಡಿಸಿರುವ ಟಿ.ಎನ್ ಸೀತಾರಾಮ್, ಇಂಥಾ ಕೊರೋನಾ ಅಬ್ಬರದಲ್ಲಿ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ ಒಂದೇ ಒಂದು ಪುಟ್ಟ ಮಗುವಿಗೆ ಕೊರೋನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ ತಂದೆ ತಾಯಿಗಳು ಆತಂಕ, ಹಿಂಸೆ ಪಡಲು ಶುರು ಮಾಡುತ್ತಾರೆ. ಹೆಚ್ಚಾದರಂತೂ ರಾಜ್ಯದ ಅಂತಃಕಳೆ ಮಂಕಾಗಿ ಎಲ್ಲರೂ ಪಾಪ ಪ್ರಜ್ಞೆ ಅನುಭವಿಸ ಬೇಕಾಗುತ್ತದೆ. ಹಾಗಾಗಿ ಬೇಕಾ ಇದೆಲ್ಲಾ…ಎಂದು ಪ್ರಶ್ನಿಸಿದ್ದಾರೆ.
ಸಧ್ಯಕ್ಕೆ ಶಾಲೆ ಆರಂಭಿಸುವುದು ಬೇಡ. ಒಂದು ವರ್ಷ ಮಕ್ಕಳಿಗೆ ಸುಮ್ಮನೆ ಪ್ರಮೋಷನ್ ಕೊಟ್ಟರೆ ನಷ್ಟವೇನಿಲ್ಲ. ಮುಂದೆ ಅದನ್ನು ಸರಿ ಮಾಡಿಕೊಳ್ಳಬಲ್ಲ ಬುದ್ಧ, ಚಾಣಾಕ್ಷತೆ ಮಕ್ಕಳಿಗಿರುತ್ತದೆ ಎಂದಿದ್ದಾರೆ.