
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಮತ್ತೋರ್ವ ಖ್ಯಾತ ನಿರ್ದೇಶಕ ಮಠ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
52 ವರ್ಷದ ಗುರುಪ್ರಸಾದ್, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಲಗಾರರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ 8 ತಿಂಗಳಿಂದ ಅಪಾರ್ಟ್ ಮೆಂಟ್ ನಲ್ಲಿ ಗುರುಪ್ರಸಾದ್ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಎರಡನೇ ವಿವಾಹ ಕೂಡ ಆಗಿದ್ದರು.
ಆರ್ಥಿಕ ಸಂಕಷ್ಟಕ್ಕೆ ನೊಂದು ದುಡುಕಿನ ನಿರ್ಧಾರ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ.
ಮಠ, ಎದ್ದೇಳು ಮಂಜುನಾಥ್, ಡೈರೆಕ್ಟರ್ ಸ್ಪೆಷಲ್, ರಂಗನಾಯಕ, ಎರಡನೇ ಸಲ ಸೇರಿದಂತೆ ಹಲವು ಸಿನಿಮಾಗಳನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ಅವರ ನಿರ್ದೇಶನದ ಅಡೆಮಾ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಇದೀಗ ನಿರ್ದೇಶಕ ಗುರುಪ್ರಸಾದ್ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ